(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.15: ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದಲ್ಲದೆ. ಹಲವಾರು ಸಂಘ ಸಂಸ್ಥೆಗಳು ಹಮ್ಮಿಕೊಳ್ಳುತ್ತಿದ್ದ ನೇತ್ರ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡುವ ಮೂಲಕ ಸಾಮಾಜಿಕ ಸೇವೆಗೈದಿದ್ದ ಕೊಂಡ್ಲಳ್ಳಿ ಡಾ.ನಾಗರಾಜ್ (74) ಅವರು ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಒಂದು ವರೆ ತಿಂಗಳಿಂದ ತೀವ್ರ ಅಸ್ವಸ್ತರಾಗಿ ಆಸ್ಪತ್ರೆ ಸೇರಿದ್ದರು. ಅವರ ಪುತ್ರ ವಿಜಯನಗರಾಜ್ ಅವರು ಸಹ ನೇತ್ರ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತಮ್ಮ ಹುಟ್ಟೂರು ಕೊಂಡ್ಲಹಳ್ಳಿಯಲ್ಲಿ ನೇತ್ರ ಪರೀಕ್ಷಾ ಶಿಬಿರಗಳ ಮೂಲಕ ಸಾವಿರಾರು ಜನರಿಗೆ ಚಿಕಿತ್ಸೆ ನೀಡಿ ಹೆಸರುವಾಸಿಯಾಗಿದ್ದರು.
ಇವರ ನಿಧನಕ್ಕೆ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಪಾಲಿಕೆ ಸದಸ್ಯ ಕೆ.ಎಸ್.ಅಶೋಕ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.