ನೇಮಕಾತಿಯಾದ 1203 ಪಿಯು ಉಪನ್ಯಾಸಕರಿಗೆ ಆದೇಶ: ಅಂಬಲಗಿ ಸ್ವಾಗತ

ಕಲಬುರಗಿ,ನ.21- ಕಳೆದ 5 ವರ್ಷಗಳಿಂದ ಪದವಿಪೂರ್ವ ಕಾಲೇಜುಗಳಿಗೆ 1203 ಜನ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿಗೊಂಡು ಅದರ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಅವರಿಗೆ ನೇಮಕಾತಿ ಆದೇಶ ನೀಡುವಲ್ಲಿ ವಿಳಂಭ ಆಗಿದ್ದು, ಕೊನೆಗೆ ಅವರೆಲ್ಲರಿಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶಕುಮಾರ ಅವರು ಆದೇಶ ನೀಡಲು ಮುಂದಾಗಿರುವುದನ್ನು ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಪ್ರೊ.ಎಂ.ಬಿ.ಅಂಬಲಗಿ ಅವರು ಸ್ವಾಗತಿಸಿದ್ದಾರೆ.
ಕಳೆದ 2015 ರಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಇಬ್ಬರು ಮುಖ್ಯಮಂತ್ರಿಗಳು ಮತ್ತು ಐವರು ಶಿಕ್ಷಣ ಸಚಿವರು ಯಾವುದೇ ಕ್ರಮ ಕೈಗೊಳ್ಳದೇ ವಿಳಂಬ ಧೋರಣೆ ತಾಳಿರುವದರಿಂದ ನೇಮಕಾತಿಯಾದ ಅಭ್ಯರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಿತ್ತು. ಹೋದ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವಿಕರಿಸಿದ ಬಿ.ಎಸ್. ಯಡಿಯೂರಪ್ಪನವರು ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ರವರು 1203ಜನ ಕುಟುಂಬಗಳಿಗೆ ಆಸರೆಯಾಗಿ ಅದರಲ್ಲೂ ಲಕ್ಷಾವಧಿ ಪಿ.ಯು. ಮಕ್ಕಳಿಗೆ ಪಾಠ ಪ್ರವಚನಕ್ಕೆ ಸಹಕರಿಯಾಗಿಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಹಾಗೂ ಭಾ.ಜ.ಪ. ಮುಖಂಡರಾದ ಪ್ರೊ. ಎಂ.ಬಿ. ಅಂಬಲಗಿಯವರು ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವರಿಗೆ ಅಭಿನಂದಿಸಿದ್ದಾರೆ.
1203 ಉಪನ್ಯಾಸಕರ ನೇಮಕಾತಿಗೆ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಸತತ ಪ್ರಯತ್ನಿಸುವದರ ಜೊತೆಗೆ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕಾಗಿ ನೇಮಕಾತಿ ಮಾಡುವಂತೆ ಸರಕಾರಗಳಿಗೆ ಮನವಿ ಸಲ್ಲಿಸುವುದರ ಜೊತೆಗೆ ವಿಷಯ ಕುರಿತು ಮುಖ್ಯಮಂತ್ರಿಗಳೊಂದಿಗೆ, ಶಿಕ್ಷಣ ಸಚಿವರೊಂದಿಗೆ ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ ಎಂದು ಹೇಳಿದ್ದಾರೆ.