ಲಕ್ಷ್ಮೇಶ್ವರ,ಮಾ.27: ಸಮೀಪದ ಕುಂದಗೋಳ ತಾಲೂಕಿನ ಸಂಶೀ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತಪ್ಪ ಲಕ್ಷ್ಮೇಶ್ವರ ಇವರನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಸ್ ಮಧು ಬಂಗಾರಪ್ಪ ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.