ನೇಮಕ

ಬೆಂಗಳೂರು:ಎ.೨- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಂ. ತಿಬ್ಬೇಗೌಡ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೇಣುಗೋಪಾಲ್ ಅವರು ನೇಮಕ ಮಾಡಿದ್ದಾರೆ.
ಎಂ. ತಿಬ್ಬೇಗೌಡ ಅವರು ಕೆಪಿಸಿಸಿ ಸದಸ್ಯ ಕೆಪಿಸಿಸಿ ಪ್ರಚಾರ ಸಮಿತಿ ಸದಸ್ಯ. ಸಂಚಾಲಕ. ಸಂಯೋಜಕರಾಗಿ ಮತ್ತು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡುವ ಮೂಲಕ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ವಿಧಾನಸಭೆ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳು, ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಹಿಸಿದ ಕಡೆ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದಾರೆ.