ನೇರಳೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಏ.೧೭- ನಗರದ ನೇರಳೆ ಮಾರ್ಗದ ಮೆಟ್ರೋ ಸೇವೆ ಇಂದಿನಿಂದ ೧೫ ದಿನಗಳ ಕಾಲ ಓಡಾಟದಲ್ಲಿ ಅಡಚಣೆ ಉಂಟಾಗಲಿದೆ. ಇಂದು ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.
ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆಯಿಂದಾಗಿ ಮೆಟ್ರೋ ಸೇವೆ ೧೫ ದಿನಗಳವರೆಗೆ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಗಳಲ್ಲಿ ಬೆಳಗ್ಗೆ ೫ ರಿಂದ ರಾತ್ರಿ ೧೧ ರವರೆಗೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಗಳಲ್ಲಿ ಬೆಳಗ್ಗೆ ೫ ರಿಂದ ರಾತ್ರಿ ೧೧ ರವರೆಗೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
ಆಗಸ್ಟ್ ೨೩ ಮತ್ತು ೨೪ ರಂದು
ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ ೭ ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ಸಮಯದಲ್ಲಿ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಬೆಳಗ್ಗೆ ೭ ಗಂಟೆಯ ನಂತರ ಎಂದಿನಂತೆ ಮೆಟ್ರೋ ಸೇವೆ ಲಭ್ಯವಾಗಲಿದೆ.
ಆಗಸ್ಟ್ ೨೦ ರಿಂದ ೨೯ರಂದು
ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಿಗ್ಗೆ ೭ ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
ಆಗಸ್ಟ್ ೨೩ ಮತ್ತು ೨೪ರಂದು
ರೈಲು ಸೇವೆಯು ಮೈಸೂರು ರಸ್ತೆ ನಿಲ್ದಾಣದಲ್ಲಿ ಬೆಳಿಗ್ಗೆ ೫ ರಿಂದ ೭ ರವರೆಗೆ ಕೊನೆಗೊಳ್ಳುತ್ತದೆ. ಉಳಿದ ದಿನಗಳಲ್ಲಿ ಕೆಂಗೇರಿ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುತ್ತದೆ.
ಗ್ರೀನ್ ಲೈನ್ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.