ನೇಹಾ ಹಂತಕ ಫಯಾಜ್ ಗಲ್ಲಿಗೇರಿಸಲು ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕಲಬುರಗಿ:ಏ.30: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಹಾನಗರದ ವತಿಯಿಂದ ಮಂಗಳವಾರ ಹುಬ್ಬಳ್ಳಿಯ ಬಿಯುಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಲವ್ ಜಿಹಾದ್ ಕಾರಣಕ್ಕಾಗಿ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಆರೋಪಿ ಫಯಾಜ್ ಗಲ್ಲಿಗೇರಿಸಬೇಕು ಹಾಗೂ ಈ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಆಗ್ರಹಿಸಿ ಗುರುಕುಲ ಕಾಲೇಜಿನಲ್ಲಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಪರಿಷತ್ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಹಂಜಗಿ ಅವರು ಮಾತನಾಡಿ, ನೇಹಾ ಹಿರೇಮಠ್ ಅವರ ಹತ್ಯೆಯಾದ ದಿನದಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಎಬಿವಿಪಿ ಹಾಗೂ ಇತರ ಸಂಘಟನೆಗಳು ಬೃಹತ್ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಾಗ ಪ್ರಕರಣವನ್ನು ತಮ್ಮದೇ ಹಿಡಿತದಲ್ಲಿರುವ ಸಿಐಡಿಗೆ ವಹಿಸಿ ಪ್ರಕರಣವನ್ನು ದಾರಿ ತಪ್ಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿರುವುದು ಕಂಡುಬರುತ್ತದೆ. ಪ್ರಕರಣದ ಹಿಂದೆ ಲವ್ ಜಿಹಾದ್ ನಂತಹ ಶಡ್ಯಂತರ ಇರುವುದು ಗೋಚರವಾಗುತ್ತಿದೆ. ಕಾರಣ ಸರ್ಕಾರ ಪ್ರಕರಣದ ಹಿಂದೆ ಇರುವ ಜಾಲವನ್ನು ಭೇದಿಸುವ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗಲ್ಲು ಶಿಕ್ಷೆ ಆಗುವ ರೀತಿಯಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿಂ ಶಾಂತಕುಮಾರ್ ಶಿವಾನಿ, ಕುಮಾರಿ ಅರುಣಾ ದಿಲೀಪ್‍ಕುಮಾರ್, ಸಂತೋಷ್ ಮಹಾಮನಿ, ರಮೇಶ್, ಮನೋಜ್, ತರುಣ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.