ನೇಹಾ ಹತ್ಯೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಎಬಿವಿಪಿ ಪ್ರತಿಭಟನೆ

ಔರಾದ :ಏ.21: ನೇಹಾ ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಬೀದರ-ಔರಾದ್ ರಾಷ್ಟೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಮಾನ್ಯ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯೋಗಾಚಾರ್ಯ ರಾಜಕುಮಾರ ನಾಯಕ ಅವರು ಮಾತನಾಡಿ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆ ಜ್ಞಾನ ದೇಗುಲದಲ್ಲಿ ನಡೆದದ್ದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಜಿಹಾದಿ ಕ್ರೂರ ಮನಃಸ್ಥಿತಿಯ ಫಯಾಜ್ ಎಂಬಾತ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ, ಆರೋಪಿಯು ಕಾಲೇಜಿನೊಳಗೆ ತೆರಳಿ ಕೃತ್ಯ ಎಸಗಿರುವುದು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಸೂಚಿಸುತ್ತದೆ. ಹೆಣ್ಣು ಮಕ್ಕಳು ಹೊರಗಡೆ ಓಡಾಡಲೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕೃತ್ಯಕ್ಕೆ ಸರ್ಕಾರ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ, ಈ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.

ವಿದ್ಯಾರ್ಥಿ ಮುಖಂಡ ಅಶೋಕ ಶೆಂಬೆಳ್ಳಿ ಅವರು ಮಾತನಾಡಿ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯ ಇಲ್ಲದೆ ರಾಜಾರೋಷವಾಗಿ ಕಾಲೇಜಿನ ಪ್ರಾಂಗಣದಲ್ಲಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದಾನೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೆÇಲೀಸರು ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಪೆÇಲೀಸರು ರಾಜ್ಯದ ಶಾಲಾ-ಕಾಲೇಜುಗಳ ಬಳಿ ಮಫ್ತಿಯಲ್ಲಿ ಕೆಲಸ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ, ಲಕ್ಷ್ಮಿಕಾಂತ ಚ್ಯಾರೆ, ಅನಿಲ ಮೇತ್ರೆ, ರಮೇಶ ವಾಘಮಾರೆ, ಮಲ್ಲಿಕಾರ್ಜುನ ಟೆಕರಾಜ, ನಿಲಮ್ಮಾ, ಪೂಜಾ,ವೈಷ್ಣವಿ, ಭಾಗ್ಯ ಶ್ರೀ, ಸುಹಾಸಿನಿ, ರೊಹಿನಿ, ವಿಜಯಕುಮಾರ್, ಗಣೇಶ, ಸೂರ್ಯಕಾಂತ ಇಟಗ್ಯಾಳ, ನಿತಿನ್ ಮುಲಗೆ, ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.