ನೇಹಾ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬೀದರ್: ಏ.22:ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯ ಮುಖಂಡ ರೇವಣಸಿದ್ಧ ಜಾಡರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ಘಟನೆ ನಾಗರಿಕ ಸಮಾಜವೇ ತಲೆ ತಗ್ಗಿಸುವಂಥದ್ದು. ಘಟನೆಯಿಂದ ವಿದ್ಯಾರ್ಥಿ ಸಮೂಹದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರಿಂದಾಗಿ ಕೊಲೆ, ಹಲ್ಲೆ, ಬೆದರಿಕೆ, ಗಲಭೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿ ಘಟನೆಯು ಲವ್ ಜಿಹಾದನಂಥ ಕೃತ್ಯವಾಗಿದೆ. ಇದರ ಹಿಂದೆ ದೊಡ್ಡ ಜಾಲವೇ ಇರುವ ಶಂಕೆ ಇದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಪ್ರಕರಣವನ್ನು ಹಗುರವಾಗಿ ಪರಿಗಣಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ