ನೇಹಾ ಹಿರೇಮಠ ಕೊಲೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ. ತಹಶೀಲ್ದಾರರಿಗೆ ಮನವಿ


ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಏ.೨೦; ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠರವರನ್ನು ಭೀಕರ ಹತ್ಯೆಯನ್ನು ಖಂಡಿಸಿ ತಾಲೂಕು ಎಬಿವಿಪಿಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಎಬಿವಿಪಿ, ವಿಶ್ವಹಿಂದು ಪರಿಷತ್ತ ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆಯೊಂದಿಗೆ ಹೊಸಪೇಟೆ ರಸ್ತೆ, ಐ.ಬಿ.ವೃತ್ತದ ಮುಖಾಂತರ ತಹಶಿಲ್ದಾರರ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.ಕಾನೂನಿನ ಯಾವುದೇ ಭಯವಿಲ್ಲದೆ ಈ ರೀತಿಯಾಗಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತನು ವಿದ್ಯಾರ್ಥಿನಿಯ ಮೇಲೆ ಅಮಾನಷುವಾಗಿ ಕೃತ್ಯ ಎಸಗಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.ರಾಜಾರೋಷವಾಗಿ ಇಂತಹ ಕೃತ್ಯ ನಡೆಯುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಇದರಿಂದ ಕಾಲೇಜಿಗೆ ವಿದ್ಯಾರ್ಥಿಗಳು ಹೋಗಲು ಭಯದ ವಾತವಾರಣ ಉಂಟಾಗುತ್ತಿದೆ.ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು, ಸೂಕ್ತ ತನಿಖೆ ನಡೆಸಿ ಕೊಲೆ ಮಾಡಿರುವ ಅಪರಾಧಿಗೆ ಕಠೀಣ ಶಿಕ್ಷೆಯನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವರುಣ್ ಕೌಟಿ, ವಿ.ಹಿಂ.ಪರಿಷತ್ ನ ಎಚ್.ಎಂ.ಜಗದೀಶ, ಮುಖಂಡರಾದ ಕುಸುಮ ಜಗದೀಶ, ಸ್ವಪ್ನ ಮಲ್ಲಿಕಾರ್ಜುನ, ಹರೀಶ್, ಪ್ರಜ್ವಲ್ ಆಚಾರ್ , ಕುಲದೀಪ, ಜೀವನ, ಬಸವರಾಜ, ಸುರೇಶ, ಜವಳಿ ಮಹೇಶ, ಶಿವಕುಮಾರ ಸೇರಿದಂತೆ ಇತರರು ಇದ್ದರು.