ನೈಜ ಘಟನೆ ಆಧರಿತ ದುರಂತ ಪ್ರೇಮಕಥೆ 

ಹಾಸನದಲ್ಲಿ ನಡೆದ ನೈಜ ಘಟನೆ ಆಧರಿಸಿದ ದುರಂತ ಪ್ರೇಮಕಥೆ ಹೊಂದಿರುವ “ ಪ್ರೀತಿಯ ಹುಚ್ಚ” ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಿದೆ.

ತಮಿಳಿನಲ್ಲಿ “ಕಾದಲ್ ಪೈತ್ಯಂ” ಹೆಸರು ಇಡಲಾಗಿದೆ. ಟಿ. ಗೌರಿಕುಮಾರ್  ನಿರ್ಮಿಸುತ್ತಿರುವ “ಪ್ರೀತಿಯ ಹುಚ್ಚ” ಚಿತ್ರ ಸಂಗೀಯಮಯ ದುರಂತ ಪ್ರೇಮಕತೆ ಹೊಂದಿದ್ದು ವಿ.ಕುಮಾರ್ ಆಕ್ಷನ್‍ಕಟ್ ಹೇಳಿದ್ದಾರೆ.

1998-99ರ ಸಮಯದಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆ ಚಿತ್ರ ನಿರ್ದೇಶನಕ್ಕೆ ಪ್ರೇರಣೆ ಎಂದು ನಿರ್ದೇಶಕ ಕುಮಾರ್ ಹೇಳಿದ್ದಾರೆ.

ಅಮಾಯಕ ಯುವತಿಯೊಬ್ಬಳ ದಾರುಣ ಕಥೆಯಿದಾಗಿದ್ದು,ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕು ಮುಂಬೈನ ರೆಡ್‍ಲೈಟ್ ಏರಿಯಾಕ್ಕೆ ಮಾರಾಟವಾಗುವ  ನಾಯಕಿಯ ಜೀವನ ಮುಂದೆ ಯಾವೆಲ್ಲ  ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿ ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎನ್ನುವುದು ಚಿತ್ರದ ತಿರುಳು ಎಂದಿದ್ದಾರೆ.

ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನ ಕಾಮಾಟಿಪುರದಲ್ಲಿ 65 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಚಿತ್ರದ ಪೆÇೀಸ್ಟ್ ಪೆÇ್ರಡಕ್ಷನ್ ಕೆಲಸ ನಡೆಯುತ್ತಿದೆ. ಶಿವರಾತ್ರಿ ವೇಳೆಗೆ ಚಿತ್ರದ ಟೀಸರ್ ಹಾಗೂ ಲಿರಿಕಲ್ ಹಾಡು ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

ಸುಂಟಿಸ್ಟಾರ್ ವಿಜಯ್ ನಾಯಕನಾಗಿ ನಟಿಸಿದ್ದು, ಮುಂಬೈ ಮೂಲದ ಕುಂಕುಮ್ ನಾಯಕಿ. ಶಿವಯೋಗಿ ಗುತ್ತೆಮ್ಮನವರ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಜೆ.ಎನ್. ರಂಗರಾಜನ್ ಸಂಗೀತ , ಸುನಿಲ್ ಕೆ.ಆರ್.ಎಸ್. ಛಾಯಾಗ್ರಹಣವಿದೆ.

ತಾರಾಗಣದಲ್ಲಿ ಲೆಕ್ಕಾಚಾರ ಚಂದ್ರು, ದುಬೈ ರಫೀಕ್, ಉಮೇಶ್ ಪುಂಗ, ಜೋಗಿ ನಾಗರಾಜ್, ಪೂರ್ಣಿಮಾ, ವಿ.ಭಾಸ್ಕರರಾಜ್, ನಟ, ಕಿಲ್ಲರ್ ವೆಂಕಟೇಶ್, ಭಜರಂಗಿ ರಾಜು, ಮಹದೇವಸ್ವಾಮಿ. ಗೀತಾ, ಸುನಿತಾ, ಪ್ರಮೋದ್, ಮಹದೇವ, ಆನಂದ್ ಮುಂತಾದವರಿದ್ದಾರೆ. ಚಿತ್ರವನ್ನು ಏಪ್ರಿಲ್ ವೇಳೆಗೆ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.