ನೋಂದಣಿ ದಿನಾಂಕ ವಿಸ್ತರಿಸಲು ಮನವಿ

ಕಲಬುರಗಿ,ನ 14: ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ದಿನಾಂಕ ವಿಸ್ತರಣೆ ಮಾಡುವಂತೆ ಕರವೇ (ಕಾವಲು ಪಡೆ) ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಕ್ತಾರ ಮಂಜುನಾಥ ನಾಲವಾರಕರ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗಣೇಶ ಚೌತಿ, ದಸರಾ ಹಾಗೂ ದೀಪಾವಳಿ ಹಬ್ಬ ಸೇರಿದಂತೆ ಸಾಕಷ್ಟು ಸರಕಾರಿ ರಜೆಗಳಾಗಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮತದಾರರ ನೋಂದಣಿ ಆಗುತ್ತಿಲ್ಲ. ಕೂಡಲೇ ಚುನಾವಣಾ ಆಯೋಗ ದಿನಾಂಕ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.