ನೋಯ್ಡಾ ವಿಮಾನ ನಿಲ್ದಾಣ ಸರಕು ಸಾಗಾಣೆಗೆಯ ಹೆಬ್ಬಾಗಿಲು: ಪಿಎಂ

ನವದೆಹಲಿ.ನ.25- ಉತ್ತರ ಪ್ರದೇಶದ ನೋಯ್ಡಾದಲ್ಲಿ ಆರಂಭವಾಗಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ ಸರಕು ಸಾಗಣೆಯ ಹೆಬ್ಬಾಗಿಲು ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ತಕ್ತಪಡಿಸಿದ್ದಾರೆ.

ರಾಷ್ಟ್ರರಾಜಧಾನಿ ದೆಹಲಿ ಇಂದ 72 ಕಿಲೋಮೀಟರ್ ದೂರದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ ಇದರಿಂದ ದೇಶದ ವಿವಿಧ ಭಾಗಗಳಿಗೆ ಸರಕು ಸಾಗಣೆ ಮಾಡಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರಪ್ರದೇಶದ ಗೌತಮಬುದ್ಧ ಜಿಲ್ಲೆಯ ಜೇವರ್ ನಲ್ಲಿ ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಷ್ಟ್ರರಾಜಧಾನಿ ದೆಹಲಿಯ ಅತೀ ಸಮೀಪದಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೆಲವೇ ವರ್ಷಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರರಾಜಧಾನಿ ವಲಯದಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಲಿದೆ ಎಂದು ಹೇಳಿದ ಅವರು, ವಿಮಾನ ನಿಲ್ದಾಣ ಕಾರ್ಯಾರಂಭ ದಿಂದಾಗಿ ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ 10 ಹಾಗೂ ರಾಜ್ಯದಲ್ಲಿ 5ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ ಎಂದು ತಿಳಿಸಿದ್ದಾರೆ

ವಿಮಾನ ನಿಲ್ದಾಣ ಆರಂಭ ಮುದ್ದಾಗಿ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ