
ಕೋಲಾರ, ಮಾ.೨೯: ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಕೆ.ಎನ್.ಮಂಜುನಾಥ್ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಆದೇಶ ಹೊರಡಿಸಿದ್ದಾರೆ.
ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಎರಡು ಅವಧಿ ಕಾರ್ಯನಿರ್ವಹಿಸಿರುವ ಕೆ.ಎನ್.ಮಂಜುನಾಥ್ ಅವರನ್ನು ರಾಜ್ಯಸಂಘದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು, ಎಸ್.ಚೌಡಪ್ಪ, ಖಜಾಂಚಿ ವಿಜಯ್, ಗೌರವಾಧ್ಯಕ್ಷರಾದ ರವಿಚಂದ್ರ, ಶ್ರೀನಿವಾಸರೆಡ್ಡಿ ಮತ್ತಿತರರ ಪದಾಧಿಕಾರಿಗಳು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.