ನೌಕರರ ದಿನಾಚರಣೆ ಮುಂದೂಡಿಕೆ

ಕೋಲಾರ,ಏ.೧೭: ಕೋವಿಡ್ ೨ನೇ ಅಲೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಏ.೨೧ ರಂದು ಆಚರಿಸಬೇಕಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ನಡೆಸುವ ಸಂಬಂಧ ರಾಜ್ಯ ಆಡಳಿತ ಸುಧಾರಣೆ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಪ್ರಧಾನ ಕಾರ್ಯದರ್ಶಿ ಜಗದೀಶ್‌ಗೌಡಪ್ಪ ಪಾಟೀಲ ಮತ್ತಿತರ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಆತಂಕ ದೂರವಾಗಿ ಸಹಜಸ್ಥಿತಿಗೆ ಬಂದನಂತರ ಸರ್ಕಾರಿ ನೌಕರರ ದಿನಾಚರಣೆ ನಡೆಸುವ ದಿನಾಂಕವನ್ನು ತಿಳಿಸಲಾಗುವುದು ಮತ್ತು ಈ ಸಂಬಂಧ ಸರ್ಕಾರದಿಂದಲೂ ಸುತ್ತೋಲೆ ಶೀಘ್ರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಕೋವಿಡ್ ೨ನೇ ಅಲೆ ನಿಯಂತ್ರಣಕ್ಕೆ ಬಂದ ನಂತರ ದಿನಾಚರಣೆ ನಡೆಸಲು ತೀರ್ಮಾನ ಕೈಗೊಳ್ಳೋಣ ಎಂದು ಡಿಸಿ ಡಾ.ಆರ್.ಸೆಲ್ವಮಣಿ ಅವರು ಸೂಚಿಸಿದ್ದಾರೆ ಎಂದು ಸುರೇಶ್‌ಬಾಬು ತಿಳಿಸಿದ್ದಾರೆ.