ನೌಕರರ ಸಂಘ ರಾಷ್ಟ್ರದಲ್ಲಿ ಮಾದರಿಯಾಗಿದೆ ಪರಶುರಾಮಪ್ಪ


ಸಂಜೆವಾಣಿ ವಾರ್ತೆ
ಸಂಡೂರು ಜೂನ್ :22  ರಾಜ್ಯ ಸರ್ಕಾರಿ ನೌಕರರ ಸಂಘ ರಾಷ್ಟ್ರದಲ್ಲಿಯೇ ಮಾದರಿ ಸಂಸ್ಥೆಯಾಗಿದೆ. 2019 ರಿಂದಲೂ ಸಿ.ಎಸ್. ಷಡಕ್ಷರಯ್ಯರವರು ರಾಜ್ಯಾಧ್ಯಕ್ಷರಾದ ಬಳಿಕ ಕಳೆದ ನಾಲ್ಕು ವರ್ಷಗಳಲ್ಲಿ ಆನೇಕ ನೌಕರರ ಸ್ನೇಹಿ ಕಾರ್ಯಗಳನ್ನು ಕೈಗೊಂಡು ಉತ್ತಮ ಆಡಳಿತ ನೀಡುತ್ತಿದ್ದಾರೆ ಸಂಘವು ಹಿತ ರಕ್ಷಣವಾಗಿ ಆಪಾರವಾಗಿ ಶ್ರಮಿಸುತ್ತಿದೆ ಎಂದು ಸಂಡೂರು ತಾಲೂಕು ನೌಕರ ಸಂಘದ ಅಧ್ಯಕ್ಷ ಚೌಕಳಿ ಪರಶುರಾಮಪ್ಪನವರ ತಿಳಿಸಿದರು.
ಅವರು ಸಂಡೂರು ಪಟ್ಟಣದ ತಹಶೀಲ್ದಾರರ ಕಛೇರಿಯಲ್ಲಿ ಗ್ರೇಡ್-2 ತಹಶೀಲ್ದಾರರಾದ ಕೆ.ಎಂ. ಶಿವಕುಮಾರ ರವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಸಂಘದ ಅಧ್ಯಕ್ಷರು ಸರ್ಕಾರಿ ನೌಕರರ ಸಂಘದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆಪಾದನೆಗಳನ್ನು ಮಾಡುತ್ತ ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಐವರು ಸರ್ಕಾರಿ ನೌಕರರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಅಲ್ಲದೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಂಡೂರು ತಾಲೂಕಿನ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಮುಖಂಡರು ಸಂಘದ ಅಧ್ಯಕ್ಷರ ಸಾರಥ್ಯದಲ್ಲಿ ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘಟನಾ ಕಾರ್ಯದರ್ಶಿ ಉಲ್ಲೇಶ್, ಖಜಾಂಚಿ ಶಿವಕುಮಾರ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಹೆಚ್. ತಮ್ಮಣ್ಣ ಉಪಾಧ್ಯಕ್ಷ ಹುರುಕುಂದಪ್ಪ, ಜಡಿಯಪ್ಪ, ಶಿವರಾಜ್, ಸುರೇಶ್, ಶೇಖರ್ ಪಾಟೀಲ್, ವಿವಿಧ ಇಲಾಖೆಯ ನೌಕರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

One attachment • Scanned by Gmail