ನೌಬಾದ:ಆಟೋನಗರ ವಿದ್ಯುತ್ ಸಮಸ್ಯೆ sಸರಿಪಡಿಸಿ

ಬೀದರ್:ಜು.31: ನಗರದ ನನೌಬಾದ ಹಾಗೂ ಆಟೋನಗರ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಸುಮಾರು ಎರಡ್ಮೂರು ತಿಂಗಳಿಂದ ಈ ಸಮಸ್ಯೆ ಉದ್ಭವಿಸುತ್ತಿದ್ದು, ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಸಾಕಷ್ಟು ಸಲ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಇಲ್ಲಿಯ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೊಳಾರ್ ಎಸ್.ಸಿ ಎಸ್.ಟಿ ಸಣ್ಣ ಉದ್ದಿಮೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ.ಎಸ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ನೌಬಾದನಲ್ಲಿ ರುವ ಜೆಸ್ಕಾಮ್ ಜೆಇ ಅವರು ಸರಿಯಾಗಿ ಕಾರ್ಯ ನಿರ್ವಹಿಸದೇ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಹಾಗಾಗಿ ಈ ಭಾಗದಲ್ಲಿ ವಿದ್ಯುತ್ ತೊಂದರೆ ತುಂಬಾ ಉಂಟಾಗಿದ್ದು, ಸಾರ್ವಜನಿಕರು ತೀವ್ರವಾಗಿ ಪರದಾಡುವಂತಾಗಿದೆ. ಪ್ರತಿಯೊಂದು ಕಾರ್ಯಕ್ಕೆ ವಿದ್ಯುತ್ ಅತ್ಯಗತ್ಯವಾಗಿದ್ದು, ವಿದ್ಯುತ್ ಇಲ್ಲದೆ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ವಿಶೇಷವಾಗಿ ಆಟೋನಗರದಲ್ಲಿರುವ ಸುಮಾರು 200 ರಿಂದ 300 ವ್ಯಾಪಾರದ ಅಂಗಡಿಗಳು ಸಹ ಬಂದ್ ಇಡುವ ಪರಿಸ್ಥಿತಿ ಉಂಟಾಗಿದೆ.
ಆದ್ದರಿಂದ ಜೆಸ್ಕಾಮ್ ವ್ಯವಸ್ಥಾಪಕ ನಿರ್ದೇಶಕರು ಆದಷ್ಟು ಬೇಗ ಈ ಕಡೆ ಗಮನ ಹರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ನೌಬಾದನಲ್ಲಿರುವ ಜೆಇ ಅವರನ್ನು ಕೂಡಲೆ ವರ್ಗಾವಣೆ ಮಾಡಿ ಸೂಕ್ತ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯನ್ನು ನೇಮಕ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಕರಿಸಬೇಕೆಂದು ಪೃಥ್ವಿರಾಜ್ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.