ನೌಬಾದ್-ಭಾಲ್ಕಿ ಮಧ್ಯದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ: ಪರಿಶೀಲನೆ

ಬೀದರ ನ. 22: ನೌಬಾದ್-ಭಾಲ್ಕಿ ಮಧ್ಯೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ನವೆಂಬರ್ 21ರಂದು ಸಂಚಾರ ಕೈಗೊಂಡು ನೌಬಾದ್-ಭಾಲ್ಕಿ ಮಧ್ಯೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆದ್ದಾರಿ ಕಾಮಗಾರಿಯಿಂದಾಗಿ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಾಗಾರಿಯನ್ನು ನಡೆಸಬೇಕು ಎಂದು ನವೆಂಬರ್ 20ರಂದೇ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು, ನವೆಂಬರ್ 21ರಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದಾಗ, ಜನರಿಗೆ ಆಗುವ ಅನಾನೂಕೂಲತೆಯನ್ನು ತಪ್ಪಿಸಿ ಜನರಿಗೆ ಅನುಕೂಲವಾಗುವ ಹಾಗೆ ಕಾಮಗಾರಿಯನ್ನು ನಡೆಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮತ್ತು ತಮಗೆ ನೀಡಿದ ಗಡುವಿನ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಒತ್ತು ಕೊಡಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬೀದರ ನಗರಾಭಿವೃದ್ಧೀ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೋಟಪ್ಪಗೋಳ ಹಾಗೂ ಇತರರು ಇದ್ದರು.