ನ್ಯಾಯಾಂಗ ಇಲಾಖೆಯಿಂದ ಪರಿಸರ ದಿನಾಚರಣೆ.


ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ6: ವಿಶ್ವ ಪರಿಸರ ದಿನದ ಅಂಗವಾಗಿ ನಗರದ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅರಣ್ಯ ಇಲಾಖೆ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗದೊಂದಿಗೆ  ನ್ಯಾಯಾಲಯದ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ವಿಶ್ವ ಪರಿಸದ ದಿನಚಾರಣೆ ಮಾಡಲಾಯಿತು. 
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ಎ. ನಂದಗಡಿ ಅವರು ಪರಿಸರವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಜೊತೆಗೆ ರಕ್ಷಣೆಯ ಹೊಣೆಗಾರಿಕೆಯನ್ನು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ್ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಕಿಶನ್ ಬಿ. ಮಾಡಲಗಿ, ಸೇರಿದಂತೆ ನ್ಯಾ.ತೃಪ್ತಿ ಧರಣಿ, ನ್ಯಾ.ಸಂಜೀವ್ ಕುಮಾರ್ ಜಿ. ಹಾಗೂ ನ್ಯಾ.ಚೈತ್ರಾ ಸೇರಿದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಲನ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.