ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದ್ದ 7914 ಪ್ರಕರಣ ಇತ್ಯರ್ಥ

ವಿಜಯಪುರ:ಜು.11: ಆಸ್ತಿ ವಿಭಾಗಕ್ಕೆ ಸಂಬಂಧಿಸಿದ 141 ಪ್ರಕರಣಗಳು, 174 ಚೆಕ್ ಬೌನ್ಸ್‍ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಿಸಿದ 125 ಪ್ರಕರಣಗಳು ಹಾಗೂ ರಾಜಿಯಾಗಬಹುದಾದ 71 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 7914 ಪ್ರಕರಣಗಳು ಲೋಕ್ ಅದಾಲತ್‍ನಲ್ಲಿ ಇತ್ಯರ್ಥಗೊಂಡು ಯಶಸ್ವಿಯಾಗಿ ರಾಷ್ಟ್ರೀಯ ಲೋಕ್ ಅದಾಲತ್ ಜರುಗಿದೆ.

ಜುಲೈ.8 ರಂದು ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ಹಾಗೂ ಸರ್ಕಾರಕ್ಕೆ ಒಟ್ಟು 103,95,46,788 ರೂ.ಗಳ ಪರಿಹಾರ ಧನ-ಕಂದಾಯ ಒದಗಿಸಲಾಗಿದೆ. 122306 ವ್ಯಾಜ್ಯ ಪೂರ್ವ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ.

ಜನತಾ ನ್ಯಾಯಾಲಯಕ್ಕೆ ಸಹಕರಿಸಿದ ವಕೀಲರು, ಕಕ್ಷಿದಾರರು ಹಾಗೂ ಪೋಲಿಸ್ ಅಧಿಕಾರಿಗಳಿಗೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್.ಕುಂದರ ಅವರು ಅಭಿನಂದನೆ ಸಲ್ಲಿಸಿದ್ದಾರೆ.