
ಕಲಬುರಗಿ:ಮಾ.06: ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಕ್ಷಿದಾರರು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಅನುಕೂಲವಾಗಲೆಂದು ಸ್ಥಾಪಿಸಲಾದ ನಾಲ್ಕು ಹೊಸ ಸ್ವಯಂ ಚಾಲಿತ ನೀರಿನ ಘಟಕಕ್ಕೆ ಹೈಕೋರ್ಟನ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ಸುನೀಲ ದತ್ತ ಯಾದವ ಅವರು ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೃಷ್ಣಾಜಿ ಬಿ ಪಾಟೀಲ, ಕರ್ನಾಟಕ ಹೈಕೋರ್ಟ ಕಲಬುರಗಿ ಪೀಠದ ಹೆಚ್ಚುವರಿ ರಜಿಸ್ಟ್ರಾರ್ ಜನರಲ್ ಕೆ.ಎಸ್.ವಿಜಯ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಮಹಾನಗರ ಪಾಲಿಕೆಯ ಆಯುಕ್ತರಾದ ಪಾಟೀಲ ಭುವನೇಶ ದೇವದಾಸ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಪ್ರಧಾನ ಕಾರ್ಯಾದರ್ಶಿ ಪಿ.ಎನ್. ಕಪ್ಪನೂರ, ಉಪಾಧ್ಯಕ್ಷೆ ಫತ್ರುಬಿ ಎ.ಕೆ. ಸೇರಿದಂತೆ ಜಿಲ್ಲಾ ನ್ಯಾಯಾಧೀಶರು ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಕಿರಿಯ ಶ್ರೇಣಿ ನ್ಯಾಯಾಧೀಶರು, ನ್ಯಾಯವಾದಿಗಳು ಉಪಸ್ಥಿತರಿದ್ದರು.