ನ್ಯಾಯ್ ದಿ ಜಸ್ಟೀಸ್ ಚಿತ್ರ ತಡೆಗೆ ದೆಹಲಿ ಕೋರ್ಟ್ ನಕಾರ

ನವದೆಹಲಿ, ಜೂ.10-ನ್ಯಾಯ್: ದಿ ಜಸ್ಟೀಸ್” ಚಿತ್ರ ನಾಳೆ ಶುಕ್ರವಾರ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಹೀಗಾಗಿ ಈ ಚಿತ್ರ ಬಿಡುಗಡೆ ಎದುರಾಗಿದ್ದ ಅಡೆತಡೆಗಳು ದೂರವಾಗಿವೆ.
ನಟ ಸುಶಾಂತ್ ಸಿಂಗ್ ರಜಪೂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯದ ನ್ಯಾಯಮೂರ್ತಿ ಸಂಜೀವ್ ನರುಲಾ ಪೀಠದ ಮುಂದೆ ಇಂದು ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದರು.

ಈ ಚಿತ್ರವನ್ನು ಕುಟುಂಬದ ಒಪ್ಪಿಗೆಯಿಲ್ಲದೆ ಚಿತ್ರೀಕರಿಸಲಾಗಿದೆ ಮತ್ತು ಮಗನ ಆತ್ಮಹತ್ಯೆಯಲ್ಲಿ ಪಾತ್ರವಿದೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಗಳನ್ನು ಚಿತ್ರದಲ್ಲಿ ವಿಶ್ವಾಸಾರ್ಹರು ಎಂದು ತೋರಿಸಲಾಗಿದೆ. ಇದು ಪ್ರಕರಣ ತನಿಖೆಯ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್​ ಕಳೆದ ವರ್ಷ ನಿಗೂಢ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.