ನ್ಯಾಯ ಕೊಡಿಸುವಂತ ಕೆಲಸ ಮಾಡಿ

ರಾಯಚೂರು,ಮಾ.೨೪- ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಸಮಿತಿಯ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ ಸಮಾಜಕ್ಕೆ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆ ನಡೆದರೆ ಅವರಿಗೆ ನ್ಯಾಯ ಕೊಡಿಸುವಂತ ಕೆಲಸ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಯಚೂರು ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಮನ್ನಾಪೂರು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ನಗರದಲ್ಲಿ ನಡೆದ ಸಭೆಯಲ್ಲಿ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡಿದ ಸಂಧರ್ಭದಲ್ಲಿ ಮಾತನಾಡಿದರು,ರಾಯಚೂರು ತಾಲೂಕು ಅಧ್ಯಕ್ಷರಾಗಿ ಸುನೀಲ್ ಕುಮಾರ ವಂದಲಿ,ಸಿಂಧನೂರು ತಾಲೂಕು ಅಧ್ಯಕ್ಷರನ್ನಾಗಿ ಸಣ್ಣ ಹುಸೇನಪ್ಪ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹನುಮಂತಪ್ಪ ಮನ್ನಾಪೂರು ತಿಳಿಸಿದರು.