ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾರಿಗೆ ನಾಳೆಯೂ ವಿಚಾರಣೆ

ನವದೆಹಲಿ, ಜು.26- ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಹ
ಗಾಂಧಿಯವರನ್ನು ಇಡಿ ಅಧಿಕಾರಿಗಳು ಆರು ತಾಸುಗಳ ಕಾಲ ವಿಚಾರಣೆ ನಡೆಸಿದ್ದಾರೆ. ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಅವರಿಗೆ ನೋಟಿಸ್ ನೀಡಲಾಗಿದೆ.
ಇಂದು ನಡೆದ ವಿಚಾರಣೆ ವೇಳೆ ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆಗಳನ್ನು ಅವರಿಗೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 11 ಗಂಟೆಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಆರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ಅಧಿಕಾರಿಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ವಿಚಾರಣೆಗೆ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿ ಅವರಿಗೆ ನೋಟಿಸ್ ನೀಡಿದ್ದಾಗಿ , ನಾಳೆ ಮತ್ತೆ ಇಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ, ಇಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ ಸಹ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿದ್ದರು.