ನ್ಯುಮೋನಿಯ ಕುರಿತು ಕಾರ್ಯಾಗಾರ

ಚಿತ್ರದುರ್ಗ.ನ.೨೫;ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನ್ಯುಮೋನಿಯವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯೆಯ ಕುರಿತು ಕಾರ್ಯಾಗಾರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಉದ್ಘಾಟಿಸಿದರು. ಆರ್‍ಸಿಹೆಚ್ ಅಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ರೋಗ ವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶೀ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿಗಳು ಇದ್ದರು