ನ್ಯೂಯಾರ್ಕ್ ಶಾಲೆಗಳು ಬಂದ್: ಆನ್‌ಲೈನ್ ಪ್ರಾರಂಭ

ನ್ಯೂಯಾರ್ಕ್,ನ.೧೯- ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ನ್ಯೂಯಾರ್ಕ್‌ನಲ್ಲಿ ಶಾಲೆಗಳನ್ನು ಮುಚ್ಚಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಇಂದಿನಿಂದ ಆನ್‌ಲೈನ್ ತರಗತಿಗಳನ್ನು ಆರಂಭಿಸಲಾಗಿದ್ದು, ಈಗಾಗಲೇ ನಗರದ ೧,೮೦೦ ಶಾಲೆಗಳನ್ನು ಮುಚ್ಚಲಾಗಿದೆ ಎಂದು ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೊ ತಿಳಿಸಿದ್ದಾರೆ.
ಈ ಹಿಂದೆ ನಿರ್ಧರಿಸಿದಂತೆ ಶೇ. ೩ ರಷ್ಟು ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದ ಹಿನ್ನೆಲೆ ಶಾಲೆಗಳನ್ನು ಮುಚ್ಚಲಾಗಿದೆ. ಮುಂದಿನ ದಿನಗಳನ್ನು ನಗರದಲ್ಲಿ ಲಾಕ್‌ಡೌನ್ ಜಾರಿ ಕುರಿತಂತೆಯೂ ಚಿಂತನೆ ನಡೆಸಲಾಗಿದೆ. ಸಾರ್ವಜನಿಕರು ಲಾಕ್‌ಡೌನ್ ಮೊದಲು ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕಳೆದ ಅಕ್ಟೋಬರ್‌ನಲ್ಲಿ ಶೇ. ೨೫ ರಷ್ಟು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದರು. ಈ ಎಲ್ಲ ಪರಿಸ್ಥಿತಿಯನ್ನು ಪರಿಗಣಿಸಿರುವ ಸರ್ಕಾರ ೧೦ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಆರಂಭಿಸಲು ನಿರ್ಧರಿಸಿದೆ.
ಕಳೆದ ೨೦ ದಿನಗಳ ಹಿಂದೆ ಶಾಲೆಯನ್ನು ಆರಂಭಿಸಲಾಗಿತ್ತು. ಆದರೆ, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ sssssಶಾಲೆಗಳನ್ನು ಮುಚ್ಚಲಾಗಿದೆ.