ಚೀನಾದಿಂದ ದೇಣಿಗೆ
ನವದೆಹಲಿ,ಅ.೩- ಚೀನಾದಿಂದ ಕಾನೂನುಬಾಹಿರ ದೇಣಿಗೆ ಸಂಗ್ರಹ ಆರೋಪದ ಮೇಲೆ ನ್ಯೂಸ್‌ಕ್ಲಿಕ್‌ನ ೩೦ ಪತ್ರಕರ್ತರ ಮನೆಗಳ ಮೇಲೆ ದೆಹಲಿ ಪೊಲೀಸ್ ವಿಶೇಷ ಘಟಕ ಇಂದು ದಾಳಿ ನಡೆಸಿದೆ.ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ ೩೦ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ .ನ್ಯೂಸ್‌ಕ್ಲಿಕ್ ವಿರುದ್ಧ ಕಾನೂನಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ ನ್ಯೂಸ್‌ಕ್ಲಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ದಾಖಲೆ ಪರಿಶೀಲನೆಯಷ್ಟೇ ಮಾಡಲಾಗಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ವಿಚಾರಣೆಗಾಗಿ ಕೆಲವು ಪತ್ರಕರ್ತರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಕೂಡ ತಿಳಿದುಬಂದಿದೆ.ಇದಕ್ಕೂ ಮುನ್ನ ನ್ಯೂಸ್ ಪೋರ್ಟಲ್‌ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ ಅದರ ಫಂಡಿಂಗ್ ಕುರಿತು ತನಿಖೆ ಆರಂಭಿಸಿತ್ತು. ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೂಡ ಕೇಂದ್ರ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿತ್ತು.
ದಾಳಿ ವೇಳೆ ಪೊಲೀಸರು ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದು, ಹಾರ್ಡ್ ಡಿಸ್ಕ್‌ಗಳಲ್ಲಿನ ಡೇಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ.