ನ.೧೫ ಸಂಕ್ರಾಂತಿ ನಾಟಕ ಪ್ರದರ್ಶನ – ವಿ.ಎನ್.ಅಕ್ಕಿ

ರಾಯಚೂರು,ನ.೧೩- ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಭಗತ್ ಸಾಂಸ್ಕೃತಿಕ ಸೇವ ಸಂಘ ಹಾಗೂ ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ಬಸವ ಶರಣ ದರ್ಶನ ಇವರ ಸಹಯೋಗದಲ್ಲಿ ಪಿ.ಲಂಕೇಶ ಅವರ ಸಂಕ್ರಾಂತಿ ನಾಟಕ ಪ್ರದರ್ಶನವು ನವೆಂಬರ್ ೧೫ ರಂದು ಆಯೋಜಿಸಲಾಗಿದೆ ಎಂದು ರಂಗಭೂಮಿ ಕಲಾವಿದ ವಿ.ಎನ್.ಅಕ್ಕಿ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ,ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಂಜೆ ೬:೩೦ ಕ್ಕೆ ನಾಟಕವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು,ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ಸಾಹಿತಿ ಅಯ್ಯಪ್ಪಯ್ಯ ಹುಡಾ ಅವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಹಿರಿಯ ರಂಗಭೂಮಿ ಕಲಾವಿದ ವಿ.ಎನ್.ಅಕ್ಕಿ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗುಲ್ಬರ್ಗ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಶರಣಬಸವ ಜೋಳದಡಗಿ ಅವರು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ರಂಗಭೂಮಿ ನಿರ್ದೇಶಕ ನಿರ್ಮಲಾ ವೇಣು ಗೋಪಾಲ್ ಉಪಸ್ಥಿತಿ ಇರುವರು ಎಂದರು.
ಈ ಸಂದರ್ಭದಲ್ಲಿ ರಂಗಸ್ವಾಮಿ ಇದ್ದರು.