ನ.೧೯ : ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ – ಸಾಂಸ್ಕೃತಿಕ ಕಾರ್ಯಕ್ರಮ

ರಾಯಚೂರು.ನ.೧೮- ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನ.೧೯ ರಂದು ಪಂ.ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆಂದು ರಂಗಸಿರಿ ಸಾಂಸ್ಕೃತಿಕ ಕಲಾಬಳಗದ ರಂಗಸ್ವಾಮಿ ಅವರು ತಿಳಿಸಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶಾಸಕ ಡಾ.ಶಿವರಾಜ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ರಂಗ ಕಲಾವಿದ ವಿ.ಎನ್.ಅಕ್ಕಿ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷರಾದ ಲಲಿತಾ ಕಡಗೋಳ ಆಂಜಿನೇಯ್ಯ, ಎಂ.ಚಂದ್ರಶೇಖರ, ನಾಗವೇಣಿ ಎಸ್.ಪಾಟೀಲ್, ಜಿ.ವೆಂಕಟರೆಡ್ಡಿ, ಡಿ.ಲಕ್ಷ್ಮೀ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಸಂಭ್ರಮ ಆಯೋಜಿಸಲಾಗಿದೆಂದು ಹೇಳಿದರು.