ನ.೨೦ ಬಳ್ಳಾರಿಯಲ್ಲಿ ಎಸ್.ಟಿ ಮೋರ್ಚಾ ಸಮಾವೇಶ,೧೦ ಲಕ್ಷ ಜನರ ನಿರೀಕ್ಷೆ – ರಮಾನಂದ ಯಾದವ್

ರಾಯಚೂರು,ನ.೧೭- ನವೆಂಬರ್ ೨೦ ರಂದು ಬಳ್ಳಾರಿಯಲ್ಲಿ ಬಿಜೆಪಿ ಎಸ್.ಟಿ ಮೋರ್ಚಾ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್ ಹೇಳಿದರು.
ಅವರಿಂದು ನಗರದ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಸಮಾವೇಶಕ್ಕೆ ಸುತ್ತ ಮುತ್ತಲಿನ ಜಿಲ್ಲೆಗಳಾದ ರಾಯಚೂರು,ಯಾದಗಿರಿ,ಕೊಪ್ಪಳ,ಚಿತ್ರದುರ್ಗ,ಬೀದರ್,ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು ೧೦ ಲಕ್ಷಕ್ಕೂ ಹೆಚ್ಚು ಜನ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದ ಅವರು,ಈ ಸಮಾವೇಶಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು,ಸಂಸದರು,ಪಾಲ್ಗೊಳ್ಳಲಿದ್ದಾರೆ ಎಂದರು.
ರಾಯಚೂರು ಜಿಲ್ಲೆಯಿಂದ ೧ಲಕ್ಷ ಜನರು ಸಮಾವೇಶಕ್ಕೆ ಪಾಲ್ಗೊಳ್ಳಲಿದ್ದಾರೆ.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನಲೆ ಅಭಿನಂದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ಆದ್ದರಿಂದ ಎಲ್ಲಾ ಕಾರ್ಯಕರ್ತರು ಸಮಾವೇಶಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಅಯ್ಯಪ್ಪ ನಾಯಕ,ಕೊಟ್ರೇಶಪ್ಪ ಕೋರಿ,ಶಿವಕುಮಾರ ನಾಯಕ,ದೇವಣ್ಣ ನಾಯಕ,ನರಸಿಂಹ ನಾಯಕ ಇದ್ದರು.