ನ.೨೬ ರಂದು ರೋಟರಿಯಿಂದ ಹೊಲಿಗೆ ಯಂತ್ರ ವಿತರಣೆ”.                 

ಸೊರಬ. ನ.೨೪: ರೋಟರಿ ಸಂಸ್ಥೆಯು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಮಹಿಳೆಯರು ಆರ್ಥಿಕವಾಗಿ ಪ್ರಗತಿ ಹೊಂದಬೇಕೆಂಬ ಉದ್ದೇಶದಿಂದ ರೋಟರಿ ಸಂಸ್ಥೆ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಜ್ಞಾನೇಶ್ ಹೇಳಿದರು.ಪಟ್ಟಣದ ದಾನಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ರೋಟರಿ ಸದಸ್ಯರು  ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು ಇದೇ ತಿಂಗಳ ೨೬ ರ ಶನಿವಾರದಂದು ಬೆಳಿಗ್ಗೆ ೧೦:೩೦ಕ್ಕೆ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು. ಬ್ರಹ್ಮಶ್ರೀ ನಾರಾಯಣ ಗುರು ಸಂಸ್ಥಾನ ಮಠದ  ಶ್ರೀ ರೇಣುಕಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು. ಜೋನಲ್ ಲಿಫ್ಟಿನೆಂಟ್ ರೊಟರಿಯನ್  ಪಿ ಎಚ್ ಎಫ್ ಹಾಗೂ ರೋಟರಿ ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ನಾಗರಾಜ್ ಗುತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಮಂಜು ತವನಂದಿ ವಹಿಸಲಿದ್ದು.ನಿಕಟ ಪೂರ್ವ ಅಧ್ಯಕ್ಷರುಗಳಾದ ಪಿ ಹೆಚ್ ಎಫ್. ಕೆ.ಬಿ.ಕೃಷ್ಣಪ್ಪ ಓಟರೂ. ಪಿ ಹೆಚ್ ಎಫ್ ರಾಜು ಹಿರಿಯಾವಲಿ, ತಾಪಂ ಮಾಜಿ ಸದಸ್ಯ ಪುರುಷೋತ್ತಮ್ ಕುಪ್ಪಗಡ್ಡೆ, ಯಶೋಧರ ಜಿ, ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.ರೋಟರಿ ಸಂಸ್ಥೆಯ ಅಧ್ಯಕ್ಷ ಮಂಜು ತವ ನಂದಿ ಮಾತನಾಡಿ ಸಂಸ್ಥೆಯ ಸೇವಕಾರ್ಯಗಳು ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಳ್ಳದೆ ಎಲ್ಲಾ ಹೋಬಳಿಗಳ ಪ್ರತಿಯೊಂದು ಹಳ್ಳಿಗಳಿಗೂ ತಲುಪಬೇಕೆಂಬ ಉದ್ದೇಶದಿಂದ ಹಲವು ವಿ ಭಿನ್ನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.