ನ.೨೬ ರಂದು ಸಂವಿಧಾನ ಸಮರ್ಪಣಾ ದಿನಾಚರಣೆ –

ರಾಘವೇಂದ್ರ ಬೋರೆಡ್ಡಿ
ರಾಯಚೂರು,ನ.೧೭- ರಾಷ್ಟೀಯ ಮಾದಿಗ ಜಾಗೃತಿ ಸೇನೆ ವತಿಯಿಂದ ನ.೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು
ರಾಷ್ಟೀಯ ಮಾದಿಗ ಜಾಗೃತಿ ಸೇನೆಯ ಅಧ್ಯಕ್ಷ ರಾಘವೇಂದ್ರ ಬೋರೆಡ್ಡಿ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರನ್ನೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ .ಇದರಿಂದ ದೇಶದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ,ಆರ್ಥಿಕ , ರಾಜಕೀಯ ನ್ಯಾಯವನ್ನು , ವಿಚಾರ , ಅಭಿವ್ಯಕ್ತಿ , ನಂಬಿಕೆ , ಧರ್ಮ ಮತ್ತು ಉಪಾಸನೆಯ ಸ್ವಾತಂತ್ರವನ್ನು ಸ್ಥಾನ – ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ. ? ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ , ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥ ಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ , ಘನತೆ , ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು. ದೇಶದಲ್ಲಿ ಪ್ರಜಾಪ್ರಭುತ್ವದ ಅಥವಾ ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ.ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಸವರಾಜ,ಅಬ್ರಹಾಂ,ವೀರೇಶ್,ತಿಮ್ಮಪ್ಪ ಗಂಜಳ್ಳಿ ಇದ್ದರು.