ನ.೨೬ ರಿಂದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಿ


ದಾವಣಗೆರೆ.ನ.೧೧; ಮಾಜಿ ಸಚಿವರು, ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿನ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ
ನ. ೨೬ ರಿಂದ ೨೯ ರವರೆಗೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ೧೩ನೇ ವರ್ಷದ ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ ೨೦೨೦ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್‌ಬಾಲ್(ಲೀಗ್ ಕಂ ನಾಟೌಟ್) ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಂಡಿದ್ದು, ಇಂದು ಸಿದ್ದತೆಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಭೂಮಿಪೂಜೆಯನ್ನು ನೆರವೇರಿಸಿದ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಮಾತನಾಡಿ ಪ್ರತಿವರ್ಷ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿತು. ಆದರೆ ಈ ಬಾರಿ ಕೋವಿಡ್ ಕಾರಣದಿಂದ ನಿಯಮಗಳನ್ನು ಪಾಲಿಸುವ ದೃಷ್ಟಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿವೆ ಎಂದರು.
೧೩ ನೇ ಬಾರಿ ಈ ಟೂರ್ನಿ ೪ ದಿನಗಳ ಕಾಲ ನಡೆಯಲಿದ್ದು, ಹೊರ ರಾಜ್ಯದ ಕೇರಳ, ಚನ್ನೈ, ಗೋವಾ, ಮಹಾರಾಷ್ಟ್ರ, ಹಾಗೂ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ, ಸೇರಿದಂತೆ ೧೬ ತಂಡಗಳು ಮಾತ್ರ ಭಾಗವಹಿಸಲಿವೆ ಎಂದರು.
ಹೊರಗಿನಿಂದ ಬಂದಂತ ತಂಡಗಳಿಗೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈ ಟೂರ್ನಿಯಲ್ಲಿ ವಿಜೇತರಿಗೆ ಪ್ರಥಮ ಸ್ಥಾನ ೩.೫೫ ಲಕ್ಷ ರೂ. ಹಾಗೂ ಶಾಮನೂರು ಡೈಮಂಡ್ ಕಪ್, ದ್ವಿತೀಯ ಸ್ಥಾನಕ್ಕೆ ೨.೨೫ ಲಕ್ಷ ರೂ. ಹಾಗೂ ಶಿವಗಂಗಾ ಕಪ್, ತೃತೀಯ ಸ್ಥಾನಕ್ಕೆ ೧.೨೫ ಲಕ್ಷ ರೂ ನೀಡಲಾಗುವುದು ಎಂದರು.
ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ್, ಪ್ರಧಾನ ಕಾರ್‍ಯದರ್ಶಿ ಕುರುಡಿ ಗೀರೀಶ್ (ಸ್ವಾಮಿ), ಖಜಾಂಚಿ ಜಯಪ್ರಕಾಶ್ ಗೌಡ, ಸಬ್ ಇನ್ಸ್‌ಪೆಕ್ಟರ್ ಸಂಜಯ್‌ಕುಮಾರ್, ಗುತ್ತಿಗೆದಾರ ರಾಜುರೆಡ್ಡಿ, ಶಿವಕುಮಾರ್, ರಂಗಸ್ವಾಮಿ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್,ಸುರೇಶ್, ಸೋಮಣ್ಣ, ಮತ್ತಿತರರಿದ್ದರು.ಪೋಟೋ-೧