
ರಾಯಚೂರು,ನ.೩- ಹೊಸಮನಿ ಪ್ರಕಾಶ ವತಿಯಿಂದ ನವೆಂಬರ್ ೫ ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಬೆಳಿಗ್ಗೆ ೧೧-೩೦ ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹೊಸಮನಿ ಪ್ರಕಾಶ ಅಧ್ಯಕ್ಷ ಬಶೀರ ಅಹ್ಮದ ಹೊಸಮನಿ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಸಮಾರಂಭ ಉದ್ಘಾಟನೆಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ ಅವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಶಾಸಕ ಡಾ.ಶಿವರಾಜ ಪಾಟೀಲ್ ವಹಿಸಲಿದ್ದಾರೆ.ಮುಖ್ಯ ಅಥಿತಿಗಳಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ,ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಗೌರವ ಅಧ್ಯಕ್ಷ ರಫೀಕ್ ಅಹ್ಮದ್, ಹೊಸಮನಿ ಪ್ರಕಾಶನ ಅಧ್ಯಕ್ಷ ಬಶೀರ ಅಹ್ಮದ ಹೊಸಮನಿ ಆಗಮಿಸಲಿದ್ದಾರೆ ಎಂದರು.