ನ.೫ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ,ಅದ್ದೂರಿ ಮೆರವಣಿಗೆ – ರಂಗಣ್ಣ ಪಾಟೀಲ್ ಅಳ್ಳುಂಡಿ

ರಾಯಚೂರು,ನ.೩- ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನವೆಂಬರ್ ೫ ರಂದು ರಾಯಚೂರು ತಾಲ್ಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಅಂದು ಬೆಳಿಗ್ಗೆ ೭-೩೦ ಧ್ವಜಾರೋಹಣ ನೆರವೇರಿಸಲಾಗುವುದು,ಬೆಳಿಗ್ಗೆ ೮-೩೦ ನಾಡದೇವಿ ಭಾವಚಿತ್ರದ ಉತ್ಸವದೊಂದಿಗೆ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಮಹಾತ್ಮ ಗಾಂಧೀ ಕ್ರೀಡಾಂಗಣದಿಂದ ರಂಗಮಂದಿರದ ವರೆಗೆ ನಡೆಯಲಿದೆ ಎಂದರು.
ಉದ್ಘಾಟನಾ ಸಮಾರಂಭವು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದ ಅವರು,ಸಮ್ಮೇಳನದಲ್ಲಿ ಎರಡು ಗೋಷ್ಠಿಗಳನ್ನು ಹಮ್ಮಿಕೊಂಡಿದ್ದು,ಸಭೆ ೪-೩೦ ಕ್ಕೆ ಕವಿಗೋಷ್ಠಿ ನಡೆಯಲಿದೆ.ಸಂಜೆ ೬ ಗಂಟೆಗೆ ಬಹಿರಂಗ ಅಧಿವೇಶನ ಜರುಗಲಿದೆ. ಸಮಾರಂಭ ದಿವ್ಯ ಸಾನಿಧ್ಯವನ್ನು ಕಿಲ್ಲೇ ಬೃಹನ್ಮಠದ ಶಾಂತಾಮಲ್ಲ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ.ಕಾರ್ಯಕ್ರಮ ಅಧ್ಯಕ್ಷತೆಯನ್ನು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ವಹಿಸಲಿದ್ದಾರೆ.ಕಾರ್ಯಕ್ರಮ ಉದ್ಘಾಟನೆಯನ್ನು ಖ್ಯಾತ ಸಾಹಿತಿ ಹಾಗೂ ಚಿಂತಕರು ಕುಂ.ವೀರಭದ್ರಪ್ಪ ಮಾಡಲಿದ್ದಾರೆ.ಪ್ರಾಸ್ತಾವಿಕ ನುಡಿಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಡಿ ಮಾತನಾಡಲಿದ್ದಾರೆ.ಸ್ಮಾರಕ ಸಂಚಿಕೆ ಬಿಡುಗಡೆಯನ್ನು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಮಾಡಲಿದ್ದಾರೆ.ಚಿತ್ರಕಲಾ ಪ್ರದರ್ಶನ ಉದ್ಘಾಟನೆಯನ್ನು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಮಾಡಲಿದ್ದಾರೆ.ಪುಸ್ತಕ ಮಳಿಗೆ ಉದ್ಘಾಟನೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ ಮಾಡಲಿದ್ದು,ಹೊಸ ಕೃತಿಗಳ ಬಿಡುಗಡೆಯನ್ನು ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ ಆಂಜನೆಯ್ಯ ಮಾಡಲಿದ್ದಾರೆ.ಸಮ್ಮೇಳನ ಅಧ್ಯಕ್ಷರ ನುಡಿಯನ್ನು ಸಮ್ಮೇಳನ ಅಧ್ಯಕ್ಷ ಬಾಬು ಭಂಡಾರಿಗಲ್ ಮಾತನಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ್ ಬೇವಿನಬೆಂಚಿ,ಜಿ.ಸುರೇಶ್,ರೇಖಾ ಬಡಿಗೇರ, ಅಂಜಿನೆಯ ಇದ್ದರು.