ನ.೭ಕ್ಕೆ ಕೆರೆಗಳ ಕುರಿತ ಪುಸ್ತಕ ಬಿಡುಗಡೆದಾವಣಗೆರೆ.ನ.೪; ಜಿಲ್ಲಾ ಕನ್ನಡಸಾಹಿತ್ಯ ಪರಿಷತ್‌, ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ನ.೭ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಸಿದ್ದಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿ ನಮ್ಮ ಕೆರೆಗಳು ಸಾಂಪ್ರದಾಯಿಕ ಜಲಕನ್ನಡಿಗಳು ದಾವಣಗೆರೆ ಜಿಲ್ಲೆಯ ಕೆರೆಗಳ ಸಮಗ್ರ ಸಂಪುಟ ಪುಸ್ತಕದ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ.ಸಿ ಲೋಕೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ಜಿಲ್ಲೆಯ 22 ಕೆರೆಗಳ ನೀರಾವರಿ ಹೋರಾಟದ ರೂವಾರಿ ದಿ . ಮಂಜುನಾಥಗೌಡರ ಸ್ಮರಣಾರ್ಥ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ   ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವರಾದ ಎಸ್.ಎಸ್ . ಮಲ್ಲಿಕಾರ್ಜುನ್ ದಂಪತಿ ನೆರವೇರಿಸಲಿದ್ದಾರೆ,   ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥರಾದ ಜಸ್ಟಿನ್ ಡಿಸೌಜಾ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಪ್ರೊ ಎಸ್.ಜಿ. ರಂಗನಾಥ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.   ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಾಜಿ ಶಾಸಕ ಗುರುಸಿದ್ದನಗೌಡರು   ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರವಿಚಂದ್ರ ಆಗಮಿಸಲಿದ್ದಾರೆ.ನಂತರ ಕೆರೆಗಳ ಕುರಿತು ವಿಚಾರಸಂಕಿರಣ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ‌ ಪುಸ್ತಕದ ಲೇಖಕರಾದ ಬಸವರಾಜ ಕುಂಚೂರು, ಈ ತಿಪ್ಪೇಸ್ವಾಮಿ, ಚನ್ನವೀರಪ್ಪ,ಟಿ.ಕರಿಬಸಪ್ಪ,ಪುಷ್ಪರಾಜ್ ಇದ್ದರು.