ನ.೯ ಕ್ಕೆ ಪ್ರತಿಭಾ ಪುರಸ್ಕಾರ, ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ 

ದಾವಣಗೆರೆ.ನ.8; ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ನ.೯ ರಂದು ಬೆಳಗ್ಗೆ ೧೦ ಕ್ಕೆ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶೈಕ್ಷಣಿಕ ಸಮಾವೇಶ, ಪ್ರತಿಭಾ ಪುರಸ್ಕಾರ, ನಿವೃತ್ತ ಪ್ರಾಚಾರ್ಯರಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಬಿ‌.ರವಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು‌ ಸಂಸದ ಜಿ.ಎಂ ಸಿದ್ದೇಶ್ವರ್ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶಾಸಕುಗಳಾದ ಶಾಮನೂರು ಶಿವಶಂಕರಪ್ಪ, ಎಸ್.ಎ ರವೀಂದ್ರನಾಥ್, ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ,ಪರಿಷತ್ ಸದಸ್ಯರುಗಳಾದ ಎಸ್.ಎಲ್ ಬೋಜೇಗೌಡ,ಎಂ.ಚಿದಾನಂದಗೌಡ, ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ,ಉಪನ್ಯಾಸಕರ ಸಂಘದ ಅಧ್ಯಕ್ಷ ರ.ಹೆಚ್ ನಿಂಗೇಗೌಡ,ಪ್ರೋ.ಸಿ.ಹೆಚ್ ಮುರುಗೇಂದ್ರಪ್ಪ,ಬಿ.ಪಾಲಕ್ಷಿ ಮತ್ತಿತರರು ಆಗಮಿಸಲಿದ್ದಾರೆ.ನಂತರ ಜಾನಪದ ತಜ್ಞ ಡಾ.ಶಂಭು ಬಳಿಗಾರ ಅವರು ಉಪನ್ಯಾಸ ನೀಡಲಿದ್ದಾರೆ.ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸಕಿ ಡಾ.ಅತಿಯಾ ಕೌಸರ್ ಉಪನ್ಯಾಸ ನೀಡಲಿದ್ದಾರೆ ಎಂದರು.ಸಮಾರಂಭದಲ್ಲಿ ವಿವಿಧ ಜಿಲ್ಲೆಗಳಿಂದ ಉಪನ್ಯಾಸಕರು ಆಗಮಿಸಲಿದ್ದಾರೆ.ಸಮಾರಂಭದಲ್ಲಿ‌ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ನಡೆಯಲಿದೆ ಎಂದರು.ಸುದ್ದಿಗೋಷ್ಢಿಯಲ್ಲಿ ಪಿ.ನಾಗಪ್ಪ,ಹೊತ್ತಲಮನಿ ಮಂಜಪ್ಪ,ಸಂಗಮೇಶ್ವರ,ಯೋಗೇಶ್,ರಘು ತಿಲಕ್ ಉಪಸ್ಥಿತರಿದ್ದರು.