ನ. 1 ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ:ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಕಲಬುರಗಿ.ಅ.31:ಅರವತ್ತೈದನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಗಂಜ್ ಪ್ರದೇಶದ ಶ್ರೀ ನಗರೇಶ್ವರ ಪ್ರೌಢ ಶಾಲೆ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.

ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಗೋವಿಂದ ಎಂ.ಕಾರಜೋಳ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ನಾಡ ದೇವತೆ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೇರವೇರಿಸುವರು.

ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಸುವರ್ಣಾ ಹಣಮಂತರಾಯ ಮಲಾಜಿ,  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ  ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಈ.ಕ.ರ.ಸಾ. ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ, ಭಗವಂತ ಖೂಬಾ, ರಾಜ್ಯ ಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವಿಧಾನ ಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ ಪಾಟೀಲ, ಖನೀಜ್ ಫಾತೀಮ್, ಬಸವರಾಜ ಮತ್ತಿಮಡು, ಸುಭಾಷ ಆರ್. ಗುತ್ತೇದಾರ, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಡಾ. ಸಾಯಿಬಣ್ಣ ತಳವಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಶಶಿಕಲಾ ವಿ. ಟೆಂಗಳಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಿಳಿಯ ಕಾರ್ಯದರ್ಶಿ     ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ., ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ನಲಿನ್ ಅತುಲ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಶಿವರಾಜ ಸಜ್ಜನ ಅತಿಥಿಗಳಾಗಿ ಪಾಲ್ಗೊಳ್ಳುವರು.