ನ.12ರಂದು ಮೆಗಾ ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಚಾಮರಾಜನಗರ, ನ.09:- ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರ ಇತ್ಯರ್ಥಪಡಿಸುವ ಸಲುವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ನ.12ರಂದು ಮೆಗಾ ಲೋಕ್ ಅದಾಲತ್ ಅನ್ನು ನಡಸಲಾಗುತ್ತದೆಎಂದುಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಟಕ್‍ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಆ ಮೂಲಕ ಲೋಕ್ ಅದಾಲತ್ ಅನ್ನು ಆಯಾ ನ್ಯಾಯಾಲಯದಲ್ಲಿ ನವೆಂಬರ್ 12ರಂದು ನಡೆಸಲಾಗುತ್ತದೆ. ಈ ಮೆಗಾ ಲೋಕ್ ಅದಾಲತ್ ಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದ್ದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಮತ್ತು ಪಕ್ಷಾಕಾರರ ನಡುವೆ ಬಾಂಧವ್ಯಚೆನ್ನಾಗಿರುತ್ತದೆ ಎಂದರು.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿಸಿ, ಇತರೆ ಯಾವುದೇ ರೀತಿಯ ಸಿವಿಲ್ ಪ್ರಕರಣಗಳು, ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳು, ಮೋಟಾರ್ ವಾಹನ ಅಪಘಾತಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕೈಗಾರಿಕಾ ವಿವಾದ ಕಾಯ್ದೆ ಅಡಿಯಲ್ಲಿರುವ ಪ್ರಕರಣಗಳು ಹಾಗೂ ಇತರೆಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು, ವಿಶೇಷÀ ಕಾನೂನಿನಿಂದ ಶಿಕ್ಷಿಸಲ್ಪಡುವ ಅಪರಾಧಗಳಾದ ಚೆಕ್ಕು ಅಮಾನ್ಯ ಪ್ರಕರಣಗಳು, ಕಾರ್ಮಿಕಕಾಯ್ದೆಯಲ್ಲಿ ಬರುವಂತಹ ಪ್ರಕರಣಗಳು, ವಿದ್ಯುಚ್ಛಕ್ತಿಕಾಯ್ದೆ ಅಡಿಯಲ್ಲಿ ವಿದ್ಯುತ್ ಕಳವಿಗೆ ಸಂಬಂಧಿಸಿದ ಪ್ರಕರಣಗಳು, ಅಕ್ರಮಕಲ್ಲು, ಮರಳು ಸಾಗಾಣಿಕೆಗೆ ಸಂಬಂಧಪಟ್ಟ ಅಪರಾಧಗಳು, ಇತರೆ ಯಾವುದೇ ರಾಜೀಯೋಗ್ಯ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಲೋಕ್‍ಅದಾಲತ್ ನಲ್ಲಿರಾಜಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜಿ ಯೋಗ್ಯ ಪ್ರಕರಣಗಳಲ್ಲಿ ಪಕ್ಷಕಾರರು ಸಂಬಂಧಪಟ್ಟ ನ್ಯಾಯಾಲಯಕ್ಕೆ ನವೆಂಬರ್ 12ರಂದು ನಡೆಯಲಿರುವ ಲೋಕ್ ಅದಾಲತ್ ಗೆ ಪ್ರಕರಣವನ್ನು ವರ್ಗಾಯಿಸಲು ಮನವಿ ಸಲ್ಲಿಸಿದ್ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್‍ನ ಮುಂದೆ ಕಳುಹಿಸಲಾಗುತ್ತದೆ. ನಿಗದಿಯಾಗಿರುವ ಪ್ರಕರಣಗಳನ್ನು ಮುಂಗಡ ಅರ್ಜಿಯನ್ನು ಸಲ್ಲಿಸುವ ಮುಖಾಂತರ ಲೋಕ್‍ಅದಾಲತ್‍ನಲ್ಲಿ ತರಿಸಿಕೊಂಡು ವ್ಯಾಜ್ಯ ಇತ್ಯರ್ಥಕ್ಕೆ ಪ್ರಯತ್ನಿಸುವ ಅವಕಾಶವನ್ನು ಕೂಡಕಲ್ಪಿಸಲಾಗಿದೆ. ಅಲ್ಲದೇ ಪೂರ್ವಭಾವಿ ಸಮಾಲೋಚನಾ ಕೇಂದ್ರಗಳಲ್ಲಿ ನ್ಯಾಯಾಲಯದಿಂದ ಸಾಕಷÀ್ಟು ಪ್ರಕರಣಗಳು ಪೂರ್ವಭಾವಿ ಸಮಾಲೋಚನೆಯ ಮುಖಾಂತರ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆ ಪ್ರಕಾರ ಕಳೆದ ಒಂದು ತಿಂಗಳಿಂದ ಸಾಕಷÀ್ಟು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಮತ್ತು ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಪೂರ್ವಭಾವಿ ಸಮಾಲೋಚನೆ ಮುಖಾಂತರ ಇತ್ಯರ್ಥಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.
ಲೋಕ್ ಅದಾಲತ್‍ನಲ್ಲಿ ಪಕ್ಷಗಾರರುಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಕೊಳ್ಳಬಹುದಾಗಿದೆ. ಮುಂಬರುವ ಲೋಕ ಅದಾಲತ್ ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕುಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆಎಂದು ತಿಳಿಸಿದರು.
ಈಗಾಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ರತಿದಿನ ಹಾಗೂ ಎಲ್ಲಾ ನ್ಯಾಯಾಲಯಗಳಲ್ಲಿ ನಿತ್ಯ ಲೋಕ್‍ಅದಾಲತ್ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಏರ್ಪಡಿಸಿದ್ದು. ರಾಜೀಯೋಗ್ಯ ಪ್ರಕರಣಗಳಲ್ಲಿ, ಎರಡೂ ಪಕ್ಷಾಕಾರರನ್ನು ಕರೆಸಿ ಪೂರ್ವಭಾವಿ ಸಮಾಲೋಚನೆಯನ್ನು ನಡೆಸುತ್ತಾ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅಗತ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಹಿಂದೆ ನಡೆದ ಲೋಕ್‍ಅದಾಲತ್ ವಕೀಲರು, ಕಕ್ಷಿದಾರರು, ಪೊಲೀಸರು, ವಿಮಾ ಕಂಪನಿಗಳು ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿತ್ತು. ಇದೇ ನವೆಂಬರ್ 12ರಂದು ನಡೆಯುವ ಲೋಕ್‍ಅದಾಲತ್ ನಲ್ಲಿಅಂದಾಜು 10 ಸಾವಿರ ಮೇಲ್ಪಟ್ಟ ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಹೊಂದಲಾಗಿದೆ. ಪ್ರತಿಯೊಬ್ಬ ಪಕ್ಷಗಾರರು ಲೋಕ್‍ಅದಾಲತ್ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದುಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿಅವರು ಮನವಿ ಮಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ. ವಿರೂಪಾಕ್ಷಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.