ನ. 15 ರಂದು ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಉದ್ಘಾಟನೆ

ಕಲಬುರಗಿ,ನ.14:ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದಿಂದ ಇದೇ ನವೆಂಬರ್ 15 ರಿಂದ 21 ರವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಆಯೋಜಿಸಲಾಗಿದೆ.
ನವೆಂಬರ್ 15 ರಂದು ಮಧ್ಯಾಹ್ನ 3.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಉದ್ಘಾಟಿಸುವರು.
ಬೆಂಗಳೂರಿನ ಎನ್.ಎಸ್.ಎಸ್. ಪ್ರಾದೇಶಿಕ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕರಾದ ಕೆ.ವಿ. ಖದ್ರಿನರಸಿಂಹಮಯ್ಯಾ, ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಪ್ರತಾಪ ಲಿಂಗಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರತಿಭಾ ಚಮಾ ಹಾಗೂ ಅಕಾಡೆಮಿಕ್ ಕೌನ್ಸಿಲ್ ಮೆಂಬರ್ ಪ್ರೊ. ಕೆ. ಲಿಂಗಪ್ಪ ಅವರು ಸೇರಿದಂತೆ ಬೇರೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಂದ 150ಕ್ಕೂ ಹೆಚ್ಚು ರಾಜ್ಯ ಸೇವಾ ಯೋಜನೆಯ ಸ್ವಯಂ ಸೇವಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳು ಶಿಬಿರದಲ್ಲಿ ಪಾಲ್ಗೊಳ್ಳುವರು.
ನವೆಂಬರ್ 15 ರಿಂದ 21 ರವರೆಗೆ ಮುಖ್ಯ ಉಪನ್ಯಾಸಗಳು, ಶ್ರಮದಾನ, ಯೋಗ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ನವೆಂಬರ್ 21 ರಂದು ಬೆಳಿಗ್ಗೆ 11.30 ಗಂಟೆಗೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭ ಜರುಗಲಿದೆ.