ನ.19ರಂದು ಮಾಜಿ ಪ್ರಧಾನಿ ಇಂದಿರಾ ಜನ್ಮದಿನ

ಕಲಬುರಗಿ,ನ.17- ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ದಿನಾಂಕ : 19-11-2023 ರಂದು ಬೆಳಿಗ್ಗೆ 10-00 ಗಂಟೆಗೆ ಭಾರತ ದೇಶದ
ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನ ಆಚರಣೆ ಮತ್ತು ಸೇವಾ ಸ್ಮರಣೆ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಈ ಕಾರ್ಯಕ್ರಮಕ್ಕೆ ಪಕ್ಷದ ಜನಪ್ರತಿನಿಧಿಗಳು, ಚುನಾಯಿತ ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಗುತ್ತೇದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.