ನ.19ರವರೆಗೆ ಸಂಪತ್ ರಾಜ್ ಸಿಸಿಬಿ ಕಸ್ಟಡಿಗೆ

ಬೆಂಗಳೂರು,ನ.17-ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇನ್ನೂ ಎರಡು ದಿನಗಳ ಕಾಲ‌
ನ್ಯಾಯಾಲಯವು ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.
ನಗರದಲ್ಲಿ ನಿನ್ನೆ ರಾತ್ರಿ ಬಂಧಿಸಿದ ಆರೋಪಿ ಸಂಪತ್ ರಾಜ್ ಅವರನ್ನು ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಇಂದು‌ ಮಧ್ಯಾಹ್ನ‌ ನಗರದ 67ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಸಂಪತ್ ರಾಜ್ ಅವರಿಗೆ 67ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ಗಳು‌
ಇದೇ ನ.19ರವರೆಗೆ 2 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶ ನೀಡಿದರು.
ಸಿಸಿಬಿ ಪೊಲೀಸರ ವಶಕ್ಕೆ ನೀಡಿದ ಸಂಪತ್ ರಾಜ್ ಅವರನ್ನು ಚಾಮರಾಜಪೇಟೆಯ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ಸಂಪತ್ ರಾಜ್, ಕೊರೋನಾ ಸೋಂಕು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಅಲ್ಲಿಂದ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದು ಅವರ ಬಂಧನ ಕುರಿತಂತೆ ಹೈಕೋರ್ಟ್ ಪೊಲೀಸರಿಗೆ ಚಾಟಿ ಬೀಸಿತ್ತು.