ನ.2ರವರೆಗೂ ರಾಗಿಣಿ-ಸಂಜನಾಗೆ ಜೈಲೇ ಗತಿ

ಬೆಂಗಳೂರು,ಅ.28- ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ‌ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾದಕ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರು‌ ನವೆಂಬರ್ 2ರವರೆಗೂ ಜೈಲಿನಲ್ಲೇ ಕಾಲ ಕಳೆಯಬೇಕಿದೆ.
ರಾಗಿಣಿ, ಸಂಜನಾ ಹಾಗೂ ಇನ್ನಿತರೆ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿದೆ.
ನವೆಂಬರ್ 2ರವರೆಗೂ ಹೈಕೋರ್ಟ್​ಗೆ ದಸರಾ ರಜೆ ಇದೆ. ಇದರ ನಡುವೆ ಅಕ್ಟೋಬರ್ 29ರಂದು ರಜೆ ಕಾಲದ ಪೀಠಗಳು ಕಾರ್ಯನಿರ್ವಹಿಸಲಿವೆ. ಆದರೆ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿರುವ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಆ ದಿನ ಕಾರ್ಯನಿರ್ವಹಿಸುವ ಸಾಧ್ಯತೆ ಇಲ್ಲ.
ಕಾಯ್ದಿರಿಸಿರುವ ತೀರ್ಪನ್ನು ನವೆಂಬರ್ 2ರಂದು ನಡೆಯುವ ಕಲಾಪದಂದೇ ನ್ಯಾಯಾಲಯ ಪ್ರಕಟಿಸಲಿದೆ ಎಂಬ ಖಾತರಿಯೂ ಇಲ್ಲ. ಹೀಗಾಗಿ ರಾಗಿಣಿ ಹಾಗೂ ಸಂಜನಾಗೆ ಸದ್ಯಕ್ಕೆ ಜಾಮೀನು ಸಿಗುವ ಸಾಧ್ಯತೆಗಳಿಲ್ಲ.
ಈಗಾಗಲೇ ಎನ್​​​​ಡಿಪಿಎಸ್ ವಿಚಾರಣಾ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳೆಲ್ಲರೂ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.