ನ. 20 ರಂದು ಜಾನಪದ ಮಕ್ಕಳ ಹಬ್ಬ

ಧಾರವಾಡ,ನ17: ನವೆಂಬರ್ 20 ರಂದು ಜಾನಪದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಅಮರಗೋಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಕ್ಕೆರಪ್ಪ ತಿಳಿಸಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟ್ಯ ಭೈರವಿ ಕಲಾ ಅಕಾಡೆಮಿ ಧಾರವಾಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಜಾನಪದ ಮಕ್ಕಳ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅರವಿಂದ ಬೆಲ್ಲದ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಶ್ರೀನಿವಾಸ ಕೊಟ್ಯಾನ, ಪಾಲಿಕೆ ಸದಸ್ಯ ಮಂಜುನಾಥ ಬುರ್ಲಿ, ಪ್ರಧಾನ ಗುರುಗಳಾದ ಬಿ.ವಿ.ಬಮ್ಮನವಾಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸುರೇಶ್ ದಾಸನೂರ, ರಂಗಭೂಮಿ ಕಲಾವಿದ ಸ್ನೇಹ ಜೋಶಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಘುವೀರ ಅರವೇಡ, ಸ್ಟೀಫನ್ ಇಂಜಾಳ, ಮಂಜುನಾಥ ಕನಕೋಳ್ಳ, ಸಯ್ಯದ್ ಸೇರಿದಂತೆ ಹಲವರು ಇದ್ದರು.