ನ 21 ರಂದು ದೀಪೋತ್ಸವ, ಸಾಧನಾ ಸಮಾರಂಭ

ಹುಬ್ಬಳ್ಳಿ,ಟಿ18: ಹುಬ್ಬಳ್ಳಿಯ ವಿದ್ಯಾನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದಲ್ಲಿ ಶ್ರೀ ಜಗದ್ಗುರು ರಂಭಾಪುರಿ ಸಾಂಸ್ಕೃತಿಕ ಸೇವೆ ಸಂಘದಿಂದ ಕಾರ್ತಿಕ ದೀಪೆÇೀತ್ಸವ, ಸಾಧನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನವೆಂಬರ್ 21 ರಂದು ಸಾಯಂಕಾಲ 6 ಗಂಟೆಗೆ ನಗರದ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀದಗಂಗಾಧರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ವಿಶ್ವನಾಥ ಹಿರೇಗೌಡ್ರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮ ಸಮಾರಂಭದ ದಿವ್ಯ ಸಾನಿಧ್ಯವನ್ನು ಬಾಳೇಹೊನ್ನೂರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ನೇತೃತ್ವವನ್ನು ಸುಳ್ಳ ಪಂಚಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದು, ಲಕ್ಷ್ಮೇಶ್ವರ ಮುಕ್ತಿ ಮಂದಿರದ ಶ್ರೀ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ನೆರವೇರಿಸಲಿದ್ದಾರೆ.
ಉಪಾದೇಶಾಮೃತವನ್ನು ಡಾ ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ್, ಶಿಗ್ಗಾಂವ್ ಮಾಜಿ ಸಂಸದರಾದ ಮಂಜುನಾಥ ಕೊನ್ನೂರ ಆಗಮಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಕೃಷ್ಣಾಜಿ ಗೋಪಾಲರಾವ್ ಕುಲಕರ್ಣಿ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ಸುಳ್ಳದ, ಶಿವಾನಂದ, ಡಾ. ಹಿರೇಮಠ, ಮಹಾಲಿಂಗ ಹಂಚಿನಮಠ ಉಪಸ್ಥಿತರಿದ್ದರು