ನ. 22 ರಂದು ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆ

ಕಲಬುರಗಿ,ನ.18:ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್ (ಕೆ.ಎಸ್.ಆರ್.ಪಿ./ಐಆರ್‍ಬಿ) (ಪುರುಷ ಮತ್ತು ಮಹಿಳೆ) 2420 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ. 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಕಲಬುರಗಿ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ (CET EXAM) ಜರುಗಲಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಈಗಾಗಲೇ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಬೆಂಗಳೂರಿನ ನೇಮಕಾತಿ ಹಾಗೂ ತರಬೇತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಆದ್ದರಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ತಮ್ಮ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಪರೀಕ್ಷಾ ಕೇಂದ್ರಕ್ಕೆ 30 ನಿಮಿಷ ಮುಂಚಿತವಾಗಿ ಹಾಜರಾಗಬೇಕು. ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಾಸ್ಕ್ ಧರಿಸಬೇಕು. ಚಿಕ್ಕ ಸ್ಯಾನಿಟೈಜರ್ ಬಾಟಲ್‍ದೊಂದಿಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.