ನ.23 ರಂದು ಹರಿಹರದಲ್ಲಿ ಜನಸಂಕಲ್ಪ ಯಾತ್ರೆ

ಹರಿಹರ.ನ.೧೭; ಬರುವ ನ.23 ರಂದು ಹರಿಹರದ ಗಾಂಧಿ ಮೈಧಾನದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡ ನಗರಕ್ಕೆ ಆಗಮಿಸಲಿದ್ದು ಅಂದು ನಡೆಯುವ ಸಮಾವೇಶದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದರು.ಬಿಜೆಪಿ ಪಕ್ಷದಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಗೆ ಉತ್ತಮ ಜನಸ್ಪಂದನೆ ದೊರೆಯುತ್ತಿದೆ,ಮಧ್ಯ ಕರ್ನಾಟಕದ ಹರಿಹರ ನಗರದಲ್ಲಿ ನ.23 ರಂದು ನಡೆಯುವ ಸಮಾವೇಶ 2023ರ ವಿಧಾನಸಭೆ ಚುನಾವಣೆ ಗೆಲುವಿನ ದಿಕ್ಸೂಚಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃಧ್ದಿ ಕೆಲಸಗಳನ್ನು ಜನ ಸಾಮಾನ್ಯರಿಗೆ ತಿಳಿಸುವುದು ಹಾಗೂ ಅವರ ಪ್ರೀತಿ ವಿಶ್ವಾಸಗಳಿಸುವುದೇ ಈ ಯಾತ್ರೆಯ ಮೂಲ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಹಗಲಿರಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಎಸ್ಸಿ ಮತ್ತು ಎಸ್‌ಟಿ ಜನಾಂಗದ ಬಹುದಿನಗಳ ಬೇಡಿಕೆಯಾದ ಮೀಸಲಾತಿ ಹೆಚ್ಳಳ ಮಾಡುವ ಮೂಲಕ ಜನಾಂಗದ ಸಮಗ್ರ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಬದ್ದವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದರು.ತಾಲೂಕಿನಲ್ಲಿ ಬಿಜೆಪಿ ಪಕ್ಷವು ಮನೆಯೊಂದು ಮೂರು ಬಾಗಿಲನಂತಾಗಿದೆ ಎಂಬ ಪ್ರಶ್ನೇಗೆ ಅಕಾಂಕ್ಷಿತರು ಹೆಚ್ಚಿದರೂ ಮುಂದಿನ ಟಿಕೆಟ್ ಕೊಡುವ ನಿರ್ದಾರವನ್ನ ನಮ್ಮ ವರಿಷ್ಠರ ಕೈಯಲ್ಲಿದೆ ಎನ್ನುವುದಕ್ಕೆ ಗುಜರಾತ್ ಚುನಾವಣೆಯೇ ಸಾಕ್ಷಿಯಾಗಿದೆ ಎಂದರು.