ನ.24 ರವರೆಗೆ ಕೆಲವೆಡೆ ಮಳೆ

ಬೆಂಗಳೂರು,ನ.೨೦-ನವೆಂಬರ್ ೨೪ ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಜೊತೆಗೆ, ಹಳದಿ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲೂ ನವೆಂಬರ್ ೨೪ರ ನಂತರ ಮಳೆಯಾಗಲಿದೆ.
ದಕ್ಷಿಣ ಒಳನಾಡು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ನವೆಂಬರ್ ೨೨ ರಿಂದ ಮಳೆಯಾಗಲಿದ್ದು, ಐದು ದಿನಗಳ ಕಾಲ ಮಳೆಯಾಗಲಿದೆ. ವಿಜಯಪುರದಲ್ಲಿ ಅತಿ ಕಡಿಮೆ ತಾಪಮಾನ ಅಂದರೆ ೧೬.೪ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನವೆಂಬರ್ ೨೧ ರ ನಂತರ ಬೆಂಗಳೂರಿನಲ್ಲಿ ಶುಭ್ರವಾದ ಆಕಾಶ ಮತ್ತು ಮಳೆ ಇರುತ್ತದೆ. ಉಪ್ಪಿನಂಗಡಿ, ಶೃಂಗೇರಿ ಮತ್ತು ಸಕಲೇಶಪುರದಲ್ಲಿ ಮಳೆಯಾಗಿದೆ.
ಎಚ್‌ಎಎಲ್‌ನಲ್ಲಿ ಗರಿಷ್ಠ ತಾಪಮಾನ ೨೯.೨ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೬.೪ ಡಿಗ್ರಿ ಸೆಲ್ಸಿಯಸ್, ನಗರದಲ್ಲಿ ಗರಿಷ್ಠ ತಾಪಮಾನ ೩೦.೦ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೯.೧ ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ ತಾಪಮಾನ ೨೯.೬ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೮.೨ ಡಿಗ್ರಿ ದಾಖಲಾಗಿದೆಸೆಲ್ಸಿಯಸ್.ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕರಾವಳಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಂಜು ಕವಿದ ವಾತಾವರಣ ಇರುತ್ತದೆ.
ಹೊಸದಿಲ್ಲಿಯ ಬಹುತೇಕ ಭಾಗಗಳಲ್ಲಿ ಮಂಜು ಕವಿದ ವಾತಾವರಣವಿದ್ದು, ಗರಿಷ್ಠ ೨೮ ಮತ್ತು ಕನಿಷ್ಠ ೧೨ ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಶನಿವಾರ ಗರಿಷ್ಠ ೨೮.೯ ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ೧೨.೬ ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ