ನ. 25ರಂದು ಮಾಸಿಕ ಕೆ.ಡಿ.ಪಿ. ಸಭೆ

ಕಲಬುರಗಿ.ನ.19:ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ (ಕೆ.ಡಿ.ಪಿ.) ಎಸ್.ಡಿ.ಪಿ. ಹಾಗೂ ನಬಾರ್ಡ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ನ.25ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ವರದಿ ಮತ್ತು ಎಲ್ಲ ಮಾಹಿತಿಯೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.