ನ. 26 ರಂದು ಸಂಗೀತ ಮಹೋತ್ಸವ

ಹುಬ್ಬಳ್ಳಿ, ನ 23: ಗಾನ ಗಂಧರ್ವ ಪಂ. ಅರ್ಜುನಸಾ ನಾಕೋಡ ನ್ಯಾಷನಲ್ ಮೆಮೋರಿಯಲ್ ಟ್ರಸ್ಟ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಗಾನ ಗಂಧರ್ವ ಪಂ. ಅರ್ಜುನಸಾ ನಾಕೋಡ ಸಂಗೀತ ಮಹೋತ್ಸವ – 2022 ಕಾರ್ಯಕ್ರಮವನ್ನು ನವೆಂಬರ್ 26 ರಂದು ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಬೆ. 9 ರಿಂದ ರಾತ್ರಿ 9 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮತಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ಗೊವಿಂದ್ ಜೋಶಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸ್ವರ್ಣಾ ಗ್ರೂಫ್ ಆಫ್ ಕಂಪನೀಸ್‍ನ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ್ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಅಂದು ನಡೆಯಲಿರುವ ಸಂಗೀತೋತ್ಸವದಲ್ಲಿ 11 ಮಂದಿ ರಾಷ್ಟ್ರೀಯ ಅಂತಾರಾಷ್ಟ್ರೀಯ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ, ಹುಧಾ ಮಹಾನಗರ ಪಾಲಿಕೆ, ಭಾರತೀಯ ಜೀವ ವಿಮಾ ನಿಗಮ, ಕೆನರಾ ಬ್ಯಾಂಕ್, ಸ್ವರ್ಣ ಗ್ರೂಫ್ ಆಫ್ ಕಂಪನಿಗಳು ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಆಯೋಜನೆಗೊಂಡಿದ್ದು, ಜುಗಲ್ ಬಂದಿಗಳ ಕಲರವ ರಂಗೇರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಳಗಿ, ರಂಗಾ ಬದ್ದಿ, ಬಾಲಚಂದ್ರ ನಾಕೋಡ್, ಎಚ್.ಎಸ್. ಕಿರಣ್, ಮಧುಸೂದನ್ ನಾಕೋಡ್ ಉಪಸ್ಥಿತರಿದ್ದರು.