ಪಂಚತಂತ್ರ ತರಬೇತಿ ಕಾರ್ಯಾಗಾರ : ಹೆಚ್ಚುವರಿ ಅಸ್ತಿ ತೆರಿಗೆ ವಸೂಲಿ ಕ್ರಮಕ್ಕೆ ಸೂಚನೆ

ರಾಯಚೂರು, ಸೆ.೧೩- ಪಂಚತಂತ್ರ ೨ ತರಬೇತಿ ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆರೋರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಂಚತಂತ್ರ ೨ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ, ಅವರು ಗ್ರಾಮ ಪಂಚಾಯತಿಯ ಕೆಲವೇ ಆದಾಯ ಮೂಲಗಳಲ್ಲಿ ಅಸ್ತಿ ತೆರಿಗೆ ವಸೂಲಿ ಮಾಡುವುದು ಅತ್ಯಂತ ಪ್ರಮುಖವಾಗಿದೆ.ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಲೋಪದೋಷವಿಲ್ಲದೇ ಕ್ರಮ ಬದ್ದವಾಗಿ ಅಸ್ತಿ ತೆರಿಗೆ ವಸೂಲಿ ಮಾಡಬೇಕೆಂದು ಸೂಚನೆ ನೀಡಿದರು.
ಅಸ್ತಿ ತೆರಿಗೆ ವಸೂಲಿ ಮಾಡುವಲ್ಲಿ ಅಧಿಕಾರಿಗಳು ಲೋಪದೋಷಗಳು ವೇಸಿಗಿದರೆ ಅಂತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಲ್ಲುವುದಾಗಿ ಸೂಚನೆ ನೀಡಿದರು.
ಗ್ರಾಮ ಪಂಚಾಯತಿಯ ಆಸ್ತಿಯ ವಿವರಗಳನ್ನು ಪಂಚತಂತ್ರ ತಂತ್ರಾಂಶದಲ್ಲಿ ಕಾಲ ಕಾಲಕ್ಕೆ ವಿವರಗಳನ್ನು ನಮೂದಿಸಬೇಕು ಎಂದು ಸೂಚಿಸಿದರು.ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ಅತ್ಯಂತ ಪ್ರಮುಖ ಜವಾಬ್ದಾರಿ ಗ್ರಾಮಗಳನ್ನು ಸ್ವಚ್ಛತೆ ಮಾಡುವುದು. ಅದನ್ನು ಕ್ರಮ ಬದ್ದವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನಧಿಕೃತವಾಗಿ ಕಟ್ಟಡಗಳು ನಿರ್ಮಾಣವಾದಲ್ಲಿ ಅಂತ ಮಾಲೀಕರಿಗೆ ನೋಟಿಸ್ ಕಳುಹಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.